Home Uncategorized 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ತಡೆಯುವಂತೆ ಪೊಲೀಸರಿಗೆ ಕಾಂಗ್ರೆಸ್ ದೂರು

'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ತಡೆಯುವಂತೆ ಪೊಲೀಸರಿಗೆ ಕಾಂಗ್ರೆಸ್ ದೂರು

12
0
bengaluru

‘ಸಿದ್ದು ನಿಜ ಕನಸುಗಳು’ ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ. ಬೆಂಗಳೂರು: ‘ಸಿದ್ದು ನಿಜ ಕನಸುಗಳು’ ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ.

ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಆಯೋಜಕರಿಗೆ ಸೂಚನೆ ನೀಡಿ ಎಂದು ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಹಾಗೂ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ದೂರು ಸಲ್ಲಿಸಿದ್ದಾರೆ.

ನಾಳೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸು ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಅಶ್ವತ್ಥ್ ನಾರಾಯಣ “ಸಿದ್ದು ನಿಜ ಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನ ಎಂದು ಶ್ಲಾಘಿಸಿದ್ದರು.

bengaluru

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ.

ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ. pic.twitter.com/GRnvlmqGrp
— Dr. Ashwathnarayan C. N. (@drashwathcn) January 8, 2023

bengaluru

LEAVE A REPLY

Please enter your comment!
Please enter your name here