Home Uncategorized ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆ 

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆ 

2
0
bengaluru

ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.  ವಿಜಯಪುರ:ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. 

ಜ.03 ರ ಮಧ್ಯಾಹ್ನದವರೆಗೂ ಶ್ರೀಗಳ ದರ್ಶನಕ್ಕೆ ಭಕ್ತಾದಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಕನಿಷ್ಠ 10 ಲಕ್ಷ ಮಂದಿ ದರ್ಶನ ಪಡೆಯುವ ನಿರೀಕ್ಷೆ ಇದೆ.

ಸಂಜೆ 5 ಗಂಟೆಗೆ ವೇಳೆಗೆ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಕಳೆದ 3-4 ದಿನಗಳಿಂದ ಶ್ರೀಗಳು ಅನಾರೋಗ್ಯಕ್ಕೀಡಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.

bengaluru

LEAVE A REPLY

Please enter your comment!
Please enter your name here