Home Uncategorized ಸಿದ್ಧಗಂಗಾ ಶ್ರೀಗಳ ಸ್ಮರಣೆಯಲ್ಲಿ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ-ಸಿಎಂ ಬೊಮ್ಮಾಯಿ

ಸಿದ್ಧಗಂಗಾ ಶ್ರೀಗಳ ಸ್ಮರಣೆಯಲ್ಲಿ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ-ಸಿಎಂ ಬೊಮ್ಮಾಯಿ

5
0
bengaluru

ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರು: ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ನಡೆದಾಡಿದ ದೇವರು, ತ್ರಿವಿಧ ದಾಸೋಹಿ ಎಂದು ಭಕ್ತರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ತುಮಕೂರಿನ ಸಿದ್ಧಗಂಗಾ ಮಠದ ಡಾ ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ. ಸಿದ್ಧಗಂಗಾ ಮಠದಲ್ಲಿ ಬೆಳಗ್ಗೆಯಿಂದಲೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ನಡೆಯುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರದ ನಾಯಕರು, ರಾಜ್ಯದ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. 

ಇಂದು ಬೆಳಗ್ಗೆ ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ಧಗಂಗಾ ಶ್ರೀಗಳು ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದರು. ಅವರ ಸಂಸ್ಮರಣೆಯಲ್ಲಿ ಪುಣ್ಯಸ್ಮರಣೆ ದಿನವನ್ನು ಕಳೆದ ವರ್ಷ ಸರ್ಕಾರ ದಾಸೋಹ ದಿನ ಎಂದು ಘೋಷಿಸಿದೆ. ಈ ವರ್ಷ ಮುಂದಿನ ತಿಂಗಳು ಸರ್ಕಾರ ದಾಸೋಹ ದಿನ ಆಚರಿಸಲಿದೆ ಎಂದರು.

bengaluru

LEAVE A REPLY

Please enter your comment!
Please enter your name here