ಬೆಂಗಳೂರು:
ಬಂಧನ ಭೀತಿಯಿಂದಾಗಿ ಮಾಜಿ ಮೇಯರ್ ಸಂಪತ್ ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ಬಂಧನವಾಗುವ ಭೀತಿಯಿಂದ ಪರಾರಿಯಾಗಿದ್ದಾರೆ.
ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಪತ್ ರಾಜ್ ಬುಧವಾರವೇ ಬಿಡುಗಡೆಗೊಂಡಿದ್ದು, ಬಳಿಕ ಪರಾರಿಯಾಗಿದ್ದಾರೆ.ಗುರುವಾರ ರಾತ್ರಿ ಸಿಸಿಬಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.