Home ಕರ್ನಾಟಕ ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

16
0

ಬೆಂಗಳೂರು: ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ X ನಲ್ಲಿ ಪ್ರಕಟಿಸಿದ್ದಾರೆ.

ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು. 

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!!

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ… pic.twitter.com/6Gin6L9Dvz

— Siddaramaiah (@siddaramaiah) April 10, 2024

LEAVE A REPLY

Please enter your comment!
Please enter your name here