Home Uncategorized ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್

ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್

26
0
Advertisement
bengaluru

45 ತಾಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರು: 45 ತಾಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

2023-24 ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 15151 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, 6 ಹೊಸ ಇಎಸ್ಐ ಆಸ್ಪತ್ರೆಗಳು, ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅನೇಕ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 

“ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಎಂಬ ನಮ್ಮ  ಸರ್ಕಾರದ ಸಂಕಲ್ಪದಂತೆ ಈ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದೇವೆ” ಎಂದು ಸಿಎಂ ತಿಳಿಸಿದ್ದಾರೆ.  

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಘೋಷಣೆಯಾದ ಪ್ರಮುಖ ಅಂಶಗಳು ಹೀಗಿವೆ….

bengaluru bengaluru

ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿರುವ ಆರೋಗ್ಯ ಕೇಂದ್ರಗಳು 100  ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಇದಕ್ಕಾಗಿ 781 ಕೋಟಿ ಅನುದಾನ ಮೀಸಲು 
ತುಮಕೂರು, ಬೆಂಗಳೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್
PM-ABHM ಅಡಿಯಲ್ಲಿ ತೃತೀಯ ಹಂತದ ಆರೈಕೆಗಾಗಿ ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ, ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್ 
ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ


bengaluru

LEAVE A REPLY

Please enter your comment!
Please enter your name here