Home Uncategorized ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ, ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು, 2 ನೇ ಪತ್ನಿ ಹೇಳಿಕೆ...

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ, ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು, 2 ನೇ ಪತ್ನಿ ಹೇಳಿಕೆ ದಾಖಲು

27
0

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.  ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. 

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ ನಡೆದಿದೆ.

ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಮತ್ತೊಂದು ಸಂಕಷ್ಟ: ಹೊಸ ಪ್ರಕರಣ ದಾಖಲಿಸಿದ ಪತ್ನಿ

ವೈದ್ಯಕೀಯ ಪರೀಕ್ಷೆ ಬಳಿಕ ರವಿಯನ್ನು ವರ್ಗಾವಣೆ, ವೇಶ್ಯಾವಾಟಿಕೆ ಸಂಬಂಧ ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಪೊಲೀಸರು ಆತ ತನ್ನೆಲ್ಲಾ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದ ಶೇಷಾದ್ರಿಪುರಂ ಅಪಾರ್ಟ್ ಮೆಂಟ್ ನ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. 

ಇನ್ನು ಇದೇ ವೇಳೆ ರವಿ ವಿರುದ್ಧ ದೂರು ದಾಖಲಿಸಿದ್ದ ಆತನ 2 ನೇ ಪತ್ನಿ ಸಹ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.  ಸಿಐಡಿ ಡಿವೈಎಸ್ ಪಿ ನರಸಿಂಹಮೂರ್ತಿ ಹಾಗೂ ಮಹಿಳಾ ಅಧಿಕಾರಿ ನೇತೃತ್ವದಲ್ಲಿ ರವಿ ಪತ್ನಿಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here