Home Uncategorized ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

2
0
bengaluru

ಅಪರಾಧ ಚಟುವಟಿಕೆ ಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ  ದೂರು ಗಳಿದ್ದರೆ, ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು: ಅಪರಾಧ ಚಟುವಟಿಕೆ ಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ  ದೂರು ಗಳಿದ್ದರೆ, ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಇಲಾಖೆ ಸಿಬ್ಬಂದಿಗೆ ಪದಕ ಪ್ರದಾನ ಸಮಾರಂಭ ದಲ್ಲಿ ಪಾಲ್ಗೊಂಡ ನಂತರ, ಸುದ್ದಿಗಾರ ರೊಂದಿಗೆ ಮಾತನಾಡಿದ ಸಚಿವರು, ಸ್ಯಾಂಟ್ರೋ ರವಿ ಎಂಬುವರ ಬಗ್ಗೆ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಯವರಿಗೆ, ಹೆಚ್ಚಿನ ಮಾಹಿತಿ ಇರಬೇಕು, ಏನೇ ಇದ್ದರೂ, ಕಾನೂನು ಕ್ರಮ ವಹಿಸಲಾಗುವುದು ಎಂದರು. ಸ್ಯಾಂಟ್ರೋ ರವಿ  ಯಾವುದಾದರೂ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗಿದ್ದರೆ ಪೊಲೀಸರು ಸೂಕ್ತ ಕ್ರಮ ತೆಗೆದು ಕೊಳ್ಳುತ್ತಾರೆಎಂದು ತಿಳಿಸಿದರು.

ಇದನ್ನೂ ಓದಿ: ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರ ನಂಟು: ತನಿಖೆಗೆ ಹೆಚ್’ಡಿ.ಕುಮಾರಸ್ವಾಮಿ ಆಗ್ರಹ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಪ್ರತಿನಿತ್ಯ ನನ್ನನ್ನು ನೂರಾರು ಜನರು ಅಹವಾಲು ಸಲ್ಲಿಸಲು ಭೇಟಿಯಾಗುತ್ತಾರೆ, ಕಾಣಲು ಬರುವ ಎಲ್ಲರ ಹಿನ್ನೆಲೆ ಚರಿತ್ರೆ ಬಗ್ಗೆ ಮಾಹಿತಿ ಇರುವುದಿಲ್ಲ, ಎಂದರು. ರಾಜ್ಯದ ಪೊಲೀಸ್ ಇಲಾಖೆಗೆ, ದೇಶದಲ್ಲಿಯೇ, ಸೇವಾನಿಷ್ಟೆ, ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದೆ ಎಂದ ಸಚಿವರು ಇಂದು ಪ್ರದಾನ ಮಾಡಲ್ಪಟ್ಟ ಗೌರವವು ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಪ್ರೇರಣೆ ಯಾಗಲಿದೆ ಎಂದರು.

bengaluru

ಇಲಾಖೆಯ ಸಿಬ್ಬಂದಿಗಳ ದಕ್ಷತೆ ಹೆಚ್ಚಿಸಲು ಸರಕಾರ ಹತ್ತು ಹಲವು ಯೋಜನೆ ಗಳನ್ನು ಹಮ್ಮಿಕೊಂಡಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು, ಆದ್ಯತೆಯ ಮೇಲೆ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 

bengaluru

LEAVE A REPLY

Please enter your comment!
Please enter your name here