ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದ ಘಟನೆ ವರದಿಯಾಗಿದೆ. ಹಾಸನ: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದ ಘಟನೆ ವರದಿಯಾಗಿದೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಅಲ್ಲದೇ, ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.
ಈ ನಡುವೆ ಯಾವ ಕಾರಣಕ್ಕೆ ಭೂಮಿ ಕಂಪಿಸಿದೆ ಎಂದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಶಾಸಕ ಎ. ಮಂಜು ಸೂಚನೆ ನೀಡಿದ್ದಾರೆ.
ಸೂಚನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.