Home Uncategorized ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ

ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ

15
0

ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಹಾಸನ: ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಸೋಮವಾರ ಸಂಜೆ ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಯುವಕ ನವೀನ್(39) ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ‌ ಜಿಲ್ಲೆ ಸಕಲೇಶಪುರ  ತಾಲೂಕಿನ ತಂಬಲಗೇರಿ  ಗ್ರಾಮದ ಹೊರವಲಯದಲ್ಲಿ ಗುಂಡಿನ ದಾಳಿ ನಡೆದಿದೆ.

ನವೀನ್ ಸೇರಿದಂತೆ ನಾಲ್ವರು ಮೀನು ಹಿಡಿಯಲು ತೆರಳಿದ್ದ ವೇಳೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್​, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

LEAVE A REPLY

Please enter your comment!
Please enter your name here