ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ನಗರದ ಕುಲಶೇಖರದ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುರುವಾರ ಆರೋಪಿಯ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ 153 (ಎ) ಮತ್ತು 505 (2) ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂತರ ಆತನನ್ನು 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.