Home Uncategorized ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು

ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು

8
0
bengaluru

ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್’ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್’ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಎಂ ನಾಗರಾಜು ಮೃತ ಎಎಸ್ಐ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಮೂಲದವರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಬಸವೇಶ್ವರ ವೃತ್ತದಲ್ಲಿ ಜರ್ಮನ್ ಚಾನ್ಸಲರ್ ಬೆಂಗಾವಲು ವಾಹನದ ಸಂಚಾರದ ವೇಳೆ ಟ್ರಾಫಿಕ್ ನಿರ್ವಹಿಸಲು ನಾಗರಾಜು ಅವರನ್ನು ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಅವರಿಗೆ  ವೇಗವಾಗಿ ಬಂದ ಆಟೋ ರಿಕ್ಷಾವೊಂದು ರಭಸದಿಂದ ಡಿಕ್ಕಿ ಹೊಡೆದಿದೆ.

ಈ ವೇಳೆ 7-8 ಅಡಿ ಎತ್ತರಕ್ಕೆ ನಾಗರಾಜು ಅವರು ಹಾರಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ನಾಗರಾಜು ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಘಟನೆ ಸಂಬಂಧ ಪೊಲೀಸರು ಇದೀಗ ಆಟೋ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here