Home Uncategorized ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ...

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆ

0
0
bengaluru

ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು.  ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು. 

ಪತ್ರ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಟೀಕೆ ಬಂದು ಇದೀಗ ಪಿಯು ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹಿಂತೆಗೆದುಕೊಂಡಿದೆ. ಇದು ಕಣ್ತಪ್ಪಿನಿಂದಾಗಿ ಪ್ರಕಟವಾಗಿದ್ದು, ಇಚ್ಛೆಯುಳ್ಳ ವಿದ್ಯಾರ್ಥಿಗಳು ನಾಳೆ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಸಮಜಾಯಿಷಿ ನೀಡಿದೆ. 

ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ಸಹ ಇದೇ ರೀತಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ನಂತರ ಸಾರ್ವಜನಿಕರಿಂದ ಟೀಕೆ ವ್ಯಕ್ತವಾದ ನಂತರ ಹಿಂತೆಗೆದುಕೊಂಡ ಘಟನೆ ನಡೆದಿತ್ತು.

LEAVE A REPLY

Please enter your comment!
Please enter your name here