Home Uncategorized ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ: ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ: ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ

6
0
bengaluru

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ(NFSU) ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು. ಬೆಂಗಳೂರು: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ(NFSU) ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತ್ ಗೆ ಈ ವಾರ ಭೇಟಿ ನೀಡಿ ವಿಶ್ವವಿದ್ಯಾಲಯವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಕಳೆದ ಮೇ ತಿಂಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಇದಕ್ಕೆ ಸಂಬಂಧಪಟ್ಟಂತೆ ಪತ್ರ ಬರೆದಿದ್ದರು. ಅದಕ್ಕೆ ಕೇಂದ್ರ ಗೃಹ ಸಚಿವಾಲಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹುಬ್ಬಳ್ಳಿಯಲ್ಲಿ ಎನ್ ಎಫ್ಎಸ್ ಯು ಆವರಣ ಸ್ಥಾಪನೆಗೆ ಗೃಹ ಸಚಿವಾಲಯ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. 

One more Good news to Hubballi-Dharwad, The National Forensic Sciences University (NFSU) will have its off campus in our city. The central govt has issued letter to govt of karnataka in setting up of off-campus in Hubballi. The work will start once the state govt submits DPR. pic.twitter.com/rJBokXzwla
— Pralhad Joshi (@JoshiPralhad) January 13, 2023

ಕರ್ನಾಟಕ ಸರ್ಕಾರವು ಈ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಪ್ರಾರಂಭಿಸಬಹುದು. ಎನ್‌ಎಫ್‌ಎಸ್‌ಯು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲು ಮತ್ತು ಸಚಿವಾಲಯಕ್ಕೆ ಸಲ್ಲಿಸಲು, ಒಟ್ಟು ಭೂಮಿಯ ಅಗತ್ಯತೆ ಮತ್ತು ಭೂ ವರ್ಗಾವಣೆಯ ಶಿಷ್ಟಾಚಾರಗಳನ್ನು ಶೀಘ್ರವಾಗಿ ಅಂತಿಮಗೊಳಿಸಲು ಸರ್ಕಾರವು ಎನ್‌ಎಫ್‌ಎಸ್‌ಯುನಿಂದ ಸಂಬಂಧಿಸಿದ ಅಧಿಕಾರಿಗಳನ್ನು ಆಹ್ವಾನಿಸಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

bengaluru
bengaluru

LEAVE A REPLY

Please enter your comment!
Please enter your name here