ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಪೊಲೀಸರು ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಮತ್ತು ಮಂಜುನಾಥ್ ಎಂದು ಗುರ್ತಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದಿರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಯ ಸೆಟ್ಲಮೆಂಟ್ ಪ್ರದೇಶದಲ್ಲಿ ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದು, ಹಲ್ಲೆಗೊಳಗಾದ ಯುವಕ ದೂರು ನೀಡಿಲ್ಲ. ಅಮಾನುಷ ಕೃತ್ಯದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಪ್ರಕರಣ ದಾಖಲಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!
ಹಲ್ಲೆಗೊಳಗಾದ ಯುವಕ ಇನ್ಸ್ಟಾಗ್ರಾಂನಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಯೊಬ್ಬನ ತಾಯಿಯ ಕುರಿತು ನಿಂದನಾತ್ಮಕ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಬೆತ್ತಲೆಗೊಳಸಿ, ಥಳಿಸಿದ್ದಾರೆಂದು ಹೇಳಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನಿಗೆ ಥಳಿಸುತ್ತಿದ್ದವರು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರುವುದು ಕಂಡು ಬಂದಿದೆ.
ಘಟನೆ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಅವರು ಪ್ರತಿಕ್ರಿಯೆ ನೀಡಿ, ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಬಂಧಿತರ ಹೇಳಿಕೆ ಆಧರಿಸಿ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇದೊಂದು ಅಮಾನವೀಯ ಘಟನೆಯಾಗಿದ್ದು, ಘಟನೆ ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತ ಯುವಕ ಸಂತ್ರಸ್ತೆ ಧಾರವಾಡ ಮೂಲದವರಾಗಿದ್ದು, ಶೀಘ್ರದಲ್ಲೇ ಆತನನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.