Home Uncategorized ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

3
0
Advertisement
bengaluru

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪಂದನಾ ಅವರ ಅಗಲಿಕೆ ಸುದ್ದಿ ಆಘಾತವನ್ನುಂಟು ಮಾಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

bengaluru bengaluru

ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು.

– ಮುಖ್ಯಮಂತ್ರಿ @siddaramaiah pic.twitter.com/jL12KK4RiT
— CM of Karnataka (@CMofKarnataka) August 7, 2023

ಸ್ಪಂದನ ನಿಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ತೀರಾ ಇತ್ತೀಚೆಗಷ್ಟೆ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಅವರದ್ದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿಯಾಗಿದೆ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವು ಗಣ್ಯರು ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here