Home Uncategorized ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ

ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ

5
0
Advertisement
bengaluru

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

(ಮುಖ್ಯಮಂತ್ರಿ) ಸಿದ್ದರಾಮಯ್ಯ ನೈತಿಕತೆಯ ಬಗ್ಗೆ ಮಾತನಾಡುತ್ತಾರೆ. 11,660 ಎಕರೆ ಹೆಚ್ಚುವರಿ ಭೂಮಿಯನ್ನು ವಾಪಸ್ ಪಡೆಯಲು ಸಮಸ್ಯೆ ಏನಿದೆ? ಇದರ ಪ್ರತಿ ಎಕರೆ ಭೂಮಿಗೆ ಸುಮಾರು 5-10 ಕೋಟಿ ರೂ ವೆಚ್ಚವಾಗುತ್ತದೆ. ಈ ಹಣವನ್ನು ಅವರು ತಮ್ಮ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಬಹುದು. ನೈತಿಕತೆಯ ಬಗ್ಗೆ ಬೋಧಿಸುವ ಬದಲು ಮುಖ್ಯಮಂತ್ರಿಗಳು ಇದರ ಬಗ್ಗೆ ದೃಢ ನಿಲುವು ತಳೆಯಬೇಕು ಎಂದು ಹೇಳಿದರು.

ಸದನ ಸಮಿತಿಯ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಯೋಜನೆಯಲ್ಲಿನ ಅವ್ಯವಹಾರಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವ ವರದಿಯನ್ನು ನೀಡಿದ್ದಾರೆ. ಜುಲೈ 20, 2023 ರಂದು, ಜಯಚಂದ್ರ ಅವರು ವಿಧಾನಸಭೆಯಲ್ಲಿ ಮಾತನಾಡುತ್ತಾ, ಅಕ್ರಮಗಳಿರುವ ಕಾರಣ ಯೋಜನೆಯನ್ನು ಹಿಂಪಡೆಯಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಪುಟ ಉಪ ಸಮಿತಿಯನ್ನೂ ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ನೈಸ್ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸಿದ್ದೇವೆ ಎಂದು ಜೆಡಿಎಸ್ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು.

bengaluru bengaluru

ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಕೇಂದ್ರೀಯ ತನಿಖಾ ದಳಕ್ಕೆ ತನಿಖೆಗೆ ಶಿಫಾರಸು ಮಾಡಬೇಕೆಂದು ಕುಮಾರಸ್ವಾಮಿಯವರು ಸರ್ಕಾರವನ್ನು ಒತ್ತಾಯಿಸಿದ್ದರು.


bengaluru

LEAVE A REPLY

Please enter your comment!
Please enter your name here