Home Uncategorized ಹೈಕೋರ್ಟ್‌ಗೆ ಹೆಚ್ಚುವರಿ ಕಚೇರಿ: ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ

ಹೈಕೋರ್ಟ್‌ಗೆ ಹೆಚ್ಚುವರಿ ಕಚೇರಿ: ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ

9
0
Advertisement
bengaluru

ಹೈಕೋರ್ಟ್‌ಗೆ ಹೆಚ್ಚುವರಿ ಕಚೇರಿ, ಅಗತ್ಯ ಮೂಲಸೌಲಭ್ಯ ಒದಗಿಸುವ ಸಂಬಂಧ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಹೈಕೋರ್ಟ್ ಪೀಠ ಸೂಚನೆ ನೀಡಿದೆ. ಬೆಂಗಳೂರು: ಹೈಕೋರ್ಟ್‌ಗೆ ಹೆಚ್ಚುವರಿ ಕಚೇರಿ, ಅಗತ್ಯ ಮೂಲಸೌಲಭ್ಯ ಒದಗಿಸುವ ಸಂಬಂಧ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಈ ಸಂಬಂಧ ತುಮಕೂರಿನ ವಕೀಲ ರಮೇಶ್ ನಾಯಕ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ಮೂರು ವಾರಗಳ ಕಾಲ ಮುಂದೂಡಿತು.

ಹೈಕೋರ್ಟ್‌ಗೆ ಹೆಚ್ಚುವರಿ ಕಚೇರಿಗಳನ್ನು ಸ್ಥಳಾವಕಾಶವನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಗಮನ ಹರಿಸಿದೆ. ಆದರೆ, ಹೈಕೋರ್ಟ್‌ಗೆ ಸಲ್ಲಿಕೆಯಾಗುವ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ನ್ಯಾಯಾಧೀಶರ ನೇಮಕಾತಿ ಹಾಗೂ ಪದೋನ್ನತಿ ಪಡೆಯುತ್ತಿದ್ದು, ನ್ಯಾಯಾಧೀಶರಿಗೆ ಕೊಠಡಿಗಳನ್ನು ಒದಗಿಸುವುದು ಕಷ್ಟ ಸಾಧ್ಯವಾಗುತ್ತಿದೆ. ಹೀಗಾಗಿ ನ್ಯಾಯಾಲಯದ ಸಭಾಂಗಣಗಳನ್ನು ಒದಗಿಸುವುದಕ್ಕೆ ಸಂಬಂಧಿಸಿಂತೆ ಸಮಗ್ರವಾದ ಪ್ರಸ್ತಾವನೆಯನ್ನು ಸಿದ್ದಪಡಿಸಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಳಂಬ ಧೋರಣೆ ಅನುಸರಿಸಿದಲ್ಲಿ ಪರಿಸ್ಥಿತಿ ಕಠಿಣವಾಗಲಿದೆ ಎಂದು ಪೀಠ ತಿಳಿಸಿತು.

bengaluru bengaluru

ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಹಿಂದಿನ ಆದೇಶದಂತೆ ಕೆಲ ವಿಭಾಗಗಳನ್ನು ಸ್ಥಳಾಂತರಿಸಲು ತಾಂತ್ರಿಕ ಶಿಕ್ಷಣ ಇಲಾಖೆಯ ಕಟ್ಟಡವೊಂದರಲ್ಲಿ ಎರಡು ಕೊಠಡಿಗಳನ್ನು ಸರ್ಕಾರ ಹಸ್ತಾಂತರಿಸಿತ್ತು. ಇದಲ್ಲದೇ, ಹೆಚ್ಚುವರಿ ಸ್ಥಳಾವಕಾಶ ಒದಗಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ಹೈಕೋರ್ಟ್‌ಗೆ ಸ್ಥಳಾವಕಾಶ ಒದಗಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿತು.


bengaluru

LEAVE A REPLY

Please enter your comment!
Please enter your name here