Home Uncategorized ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್

ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್

2
0
bengaluru

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಸುಧಾಕರ್ ಅವರು ಇಂದು ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಜೊತೆ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವರ್ಚುವಲ್ ಮೂಲಕ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.

ಇದನ್ನು ಓದಿ: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ; ಹೆಚ್ಚಿದ ಆತಂಕ

ಬಾರ್, ಪಬ್ ಹಾಗೂ ಹೊಟೇಲ್​ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಮತ್ತು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

bengaluru

ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು.

bengaluru

LEAVE A REPLY

Please enter your comment!
Please enter your name here