ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ “ನಂಬಿಕೆ ನಕ್ಷೆ”(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, “ಹೊಸ ಆಸ್ತಿ ತೆರಿಗೆ ವ್ಯವಸ್ಥೆ” ಹಾಗೂ “ಖಾತಾ ವ್ಯವಸ್ಥೆ”(ನಾಗರಿಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು “ಬಿಬಿಎಂಪಿ ಖಾತಾ” ವಿತರಣೆ ಯೋಜನೆ)ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಈ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹಾರಿಸ್, ಶಾಸಕ ರಿಝ್ವಾನ್ ಹರ್ಷದ್, ಮಾಜಿ ಶಾಸಕ ಮಂಜುನಾಥ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.