Home Uncategorized ʼಯುವನಿಧಿʼ ಗೆ ಡಿ.21 ರಿಂದ ನೋಂದಣಿ ಆರಂಭ

ʼಯುವನಿಧಿʼ ಗೆ ಡಿ.21 ರಿಂದ ನೋಂದಣಿ ಆರಂಭ

21
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿಯಾದ  ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಅವರು, “ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ. ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here