Home Uncategorized ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆ: ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆ: ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18
0

ಬೆಂಗಳೂರು, ಡಿ.28: ಅಂಗಡಿ ಮುಂಗ್ಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಡಿ.28) ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ ಒಂದು ಗಂಟೆಗೆ ನಡೆಯುವ ಸಭೆಯಲ್ಲಿ ಗೃಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗ್ಗಟ್ಟುಗಳ ಮುಂಭಾಗದಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿದ್ದರು. ಕೆಲವೊಂದು ಮಳಿಗೆಗಳ ನಾಮಫಲಕಗಳಿಗೆ ಹಾನಿಗೊಳಿಸಿದ್ದರು.

LEAVE A REPLY

Please enter your comment!
Please enter your name here