Home Uncategorized ಅಕ್ಕಿ ಪೂರೈಕೆ ವಿಚಾರವಾಗಿ ನಾಳೆ ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ, ಪಿಯೂಷ್ ಗೋಯಲ್ ಭೇಟಿ

ಅಕ್ಕಿ ಪೂರೈಕೆ ವಿಚಾರವಾಗಿ ನಾಳೆ ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ, ಪಿಯೂಷ್ ಗೋಯಲ್ ಭೇಟಿ

35
0

ದೆಹಲಿಯಲ್ಲಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ. ಬೆಂಗಳೂರು: ದೆಹಲಿಯಲ್ಲಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯು ಸೌಜನ್ಯದ ಭೇಟಿಯಾಗಿದೆ. ನಾನು ಸಿಎಂ ಆದ ನಂತರ ಮೊದಲ ಬಾರಿಗೆ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದರು.

ಇದನ್ನು ಓದಿ: ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ರಾಜ್ಯಕ್ಕೆ ಅಕ್ಕಿ ಪೂರೈಕೆ ಕುರಿತು ಚರ್ಚೆ ನಡೆಸುತ್ತಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅನ್ನ ಭಾಗ್ಯ ಯೋಜನೆ ಜಾರಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ಯೋಜನೆ ಜಾರಿ ವಿಳಂಬವಾಗಬಹುದು ಎಂದರು. ಅನ್ನ ಭಾಗ್ಯ ಯೋಜನೆ ಜುಲೈ 1ರಿಂದ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಒಂದು ವೇಳೆ ಯೋಜನೆ ಜಾರಿಯಾಗದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.

“ಅಕ್ಕಿ ಖರೀದಿ ಸಂಬಂಧ ರಾಜ್ಯ ಸರ್ಕಾರ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ಮತ್ತು ಪಂಜಾಬ್‌ನೊಂದಿಗೆ ಮಾತನಾಡಿದೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್ ದೂರದಲ್ಲಿದೆ. ನಾವು ಸಾರಿಗೆ ವೆಚ್ಚವನ್ನು ಪರಿಗಣಿಸಬೇಕಾಗಿದೆ. ಲಭ್ಯವಿರುವ ಆಯ್ಕೆಯು ಛತ್ತೀಸ್‌ಗಢವಾಗಿದೆ. ಇಲ್ಲಿಯೂ ಸಾರಿಗೆ ವೆಚ್ಚ ಹೆಚ್ಚಾಗುತ್ತಿದೆ’’ ಎಂದು ಸಿದ್ದರಾಮಯ್ಯ ವಿವರಿಸಿದರು.

“ಈ ಮಧ್ಯೆ, ನಾವು ಕೇಂದ್ರ ಸರ್ಕಾರದ ಎಲ್ಲಾ ಮೂರು ಏಜೆನ್ಸಿಗಳಾದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ(ಎನ್‌ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ(ಎನ್‌ಎಎಫ್‌ಇಡಿ) ಮತ್ತು ಕೇಂದ್ರ ಭಂಡಾರ್‌ಗಳಿಂದ ಕೊಟೇಶನ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಸಿಎಂ ಹೇಳಿದರು.

LEAVE A REPLY

Please enter your comment!
Please enter your name here