Home Uncategorized ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ- ಸಿ.ಟಿ.ರವಿ

ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ- ಸಿ.ಟಿ.ರವಿ

44
0

ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್  ಕೆಟ್ಟ  ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು  ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಬೆಂಗಳೂರು: ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್  ಕೆಟ್ಟ  ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು  ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ , ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‍ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ ಪತ್ರ ಮುಖೇನ ವಿನಂತಿ ಮಾಡುತ್ತಾರೆ. ಜೂನ್ 12 ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NCCF, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ  ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ  ಕೇಂದ್ರ ಸರ್ಕಾರ ನೀಡುತ್ತಿದೆ ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಯಂತೆ  ನೀಡಿದೆ ಎಂದು ಅವರು ವಿವರಿಸಿದ್ದಾರೆ. 

ಪ್ರತಿ ಕುಟುಂಬದ  ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ ಎಂದು ತಿಳಿಸಿದ್ದಾರೆ.

ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಆಕ್ಷೇಪಿಸಿದ್ದಾರೆ.

LEAVE A REPLY

Please enter your comment!
Please enter your name here