ಬೆಂಗಳೂರು, ಮಾ.27: ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮನೆ, ಕಚೇರಿ ಸೇರಿಂದತೆ 60 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್ ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.