ನವದೆಹಲಿ/ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಸುಪ್ರೀಂ ಕೋರ್ಟ್ನಲ್ಲೂ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕಳೆದ ಚುನಾವಣೆಯಲ್ಲಿ ಯತ್ನಾಳ್ ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಹೈಕೋರ್ಟ್ ಮೊರೆ ಹೋಗಿದ್ದರು. 2025ರ ಜುಲೈ 18ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಹಮೀದ್ ಮುಶ್ರೀಫ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಅಷ್ಟೇ ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು.
