Home Uncategorized ಅಗತ್ಯ ಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿಯಾಗುತ್ತೇನೆ: ಎಚ್‌.ಡಿ ಕುಮಾರಸ್ವಾಮಿ

ಅಗತ್ಯ ಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿಯಾಗುತ್ತೇನೆ: ಎಚ್‌.ಡಿ ಕುಮಾರಸ್ವಾಮಿ

17
0

ಬೆಂಗಳೂರು: ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ಅದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ?. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇದೆಲ್ಲ ಪ್ರಾರಂಭಿಕ ಹಂತದಲ್ಲಿ ‌ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದರು 

ಲೋಕಸಭೆಬ ಚುನಾವಣೆಗೆ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ʼನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣʼ ಎಂದರು

LEAVE A REPLY

Please enter your comment!
Please enter your name here