ಅಡಿಕೆ ಸಂಶೋಧನಾ ಕೇಂದ್ರವನ್ನು ಗಟ್ಟಿಗೊಳಿಸಲು, ತಜ್ಞರ ಸಮಿತಿ ರಚಿಸಿ ಅಡಿಕೆ ರೋಗ ತಡೆಯುವಿಕೆಗೆ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಅಡಿಕೆ ಮತ್ತು ಕುಕ್ಕು ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ)ದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.