Home Uncategorized ಅಣೆಕಟ್ಟಿಗೆ ಪಂಪ್ ಮೋಟಾರ್ ಇರಿಸಲು ಹೋಗಿ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವು

ಅಣೆಕಟ್ಟಿಗೆ ಪಂಪ್ ಮೋಟಾರ್ ಇರಿಸಲು ಹೋಗಿ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವು

19
0

ಪುಣೆ: ಮಹಾರಾಷ್ಟ್ರ(Maharashtra) ಪುಣೆ (Pune)ಜಿಲ್ಲೆಯಲ್ಲಿ ಇಂದು (ಗುರುವಾರ) ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸಲು ಪ್ರಯತ್ನಿಸುತ್ತಿದ್ದಾಗ ನಾಲ್ವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೋರ್ ತಹಸಿಲ್‌ನ ನಿಗ್ಡೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ನಾಲ್ವರು ಗುಂಜವಾನಿ ಅಣೆಕಟ್ಟಿನ ಹಿನ್ನೀರಿನಲ್ಲಿ ಮೋಟಾರ್ ಪಂಪ್ ಇರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ತಗುಲಿ ನೀರಿನಲ್ಲಿ ಮುಳುಗಿದ್ದಾರೆ. ಇದೀಗ ಅವರ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ರಾಜಗಡ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪಿಯ ತಾಯಿ 

ಬಲ್ಲಿಯಾ : 14 ವರ್ಷದ ಬಾಲಕಿಯ ಮೇಲೆ ಆಕೆಯ ನೆರೆಹೊರೆಯವರು ಅತ್ಯಾಚಾರವೆಸಗಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ ಆಕೆಗೆ ಗರ್ಭಪಾತ ಮಾಡಿಕೊಳ್ಳುವಂತೆ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ:Maharashtra: ಸೆಪ್ಟಿಕ್ ಟ್ಯಾಂಕ್‌ಗೆ ಜಾರಿಬಿದ್ದು ಇಬ್ಬರು ಕಾರ್ಮಿಕರು ಸಾವು

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮತ್ತು ಆತನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗಾಪ್ರಸಾದ್ ತಿವಾರಿ ಗುರುವಾರ ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಪಕ್ಕದ ಮನೆಯ ವ್ಯಕ್ತಿ ಅತ್ಯಾಚಾರವೆಸಗಿದ್ದರು. ಇದಾದ ನಂತರ ಆರೋಪಿಯ ತಾಯಿ ಮಂಗಳವಾರ ರಾಣಿಗಂಜ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಯ ಗರ್ಭಪಾತ ಮಾಡಿಸಿದ್ದಾರೆ.

ಬಾಲಕಿಯ ತಂದೆಯಿಂದ ಬಂದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬುಧವಾರ ರಾತ್ರಿಯಿಂದ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಕಾರ್ಯಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here