ಬೆಂಗಳೂರು: ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಭೀಕರ ದುರಂತದಲ್ಲಿ 14 ಜನ ಸಜೀವ ದಹನ ಆಗಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ವನಂಬಾಡಿಯ ದಿನೇಶ್ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
IT ದಾಳಿ ಸಂಬಂಧ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಪಟಾಕಿ ಮಳಿಗೆಯಲ್ಲಿ ಕೆಲಸಕ್ಕೆ ಒಂದು ತಿಂಗಳ ಹಿಂದೆ ಸೇರಿಕೊಂಡಿದ್ದ, ಇನ್ನು ದುರ್ಘಟನೆ ನಡೆಯುವ ಸಂದರ್ಭದಲ್ಲಿ ಅತ್ತಿಬಲೆಯ ಪಟಾಕಿ ಮಳಿಗೆಗೆ ಸ್ನೇಹಿತನ ಹುಟ್ಟು ಹಬ್ಬದ ಅಂಗವಾಗಿ ಪಟಾಕಿಯನ್ನು ಖರೀದಿ ಮಾಡಲು, ಗಾರೆಬಾವಿ ಪಾಳ್ಯದ ಯುವಕ ವೆಂಕಟೇಶ್ ತೆರಳಿದ್ದ. ಈತ ಪಟಾಕಿ ಖರೀದಿ ಮಾಡುತ್ತಿದ್ದಾಗಲೇ ಏಕಾಏಕಿ ಮಳಿಗೆಯಲ್ಲಿ ಪಟಾಕಿಗೆ ಬೆಂಕಿ ಆವರಿಸಿಕೊಂಡಿದ್ದು, ವೆಂಕಟೇಶ್ ತಪ್ಪಿಸಿಕೊಳ್ಳಲು ಯತ್ನಿಸಿದರು ಸಹ ಶೇಕಡ 30ರಷ್ಟು ದೇಹದ ಭಾಗ ಸುಟ್ಟು ಹೋಗಿತ್ತು.
ಈತನನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ನಿಧನರಾಗಿದ್ದು ಪಟಾಕಿ ದುರಂತದ ಪ್ರಕರಣದಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿಕೆ ಆಗಿದೆ. ವೆಂಕಟೇಶ್ ಬಾಡಿ ಬಿಲ್ಡರ್ ಕೂಡ ಆಗಿದ್ದ ಜೊತೆಗೆ ಪೋಟೋ ಸ್ಟುಡಿಯೋ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಆಸ್ಪತ್ರೆಯಲ್ಲಿ ದಾಖಲಾದ ಬಳಿಕ ಸರಿಯಾದ ಚಿಕಿತ್ಸೆ ಸಿಗಲಿಲ್ಲ ಎಂದು ಮನೆಯವರು ಕಳೆದ 3-4 ದಿನಗಳಿಂದ ಪರದಾಡಿದ್ದರು. ಇದಾದ ಬಳಿಕ ಈಗ ವೆಂಕಟೇಶ್ ಮೃತಪಟ್ಟಿದ್ದು ಕುಟುಂಬದವರ ಆಕ್ರೋಶ ಮುಗಿಲು ಮುಟ್ಟಿದೆ…
The post ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ವೆಂಕಟೇಶ್ ಸಾವು: ಸಾವಿನ ಸಂಖ್ಯೆ 16ಕ್ಕೆ ಏರಿಕೆ! appeared first on Ain Live News.