ಬೆಂಗಳೂರು;– ಅತ್ತಿಬೆಲೆ ಪಟಾಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ಟೋಬರ್ 7 ರಂದು ಸಂಜೆ 3:30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿತ್ತು, ಈ ಅವಘಡದಲ್ಲಿ 14 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತರಾಗಿದ್ದರು. ಘಟನೆ ಸಂಬಂಧ ಶ್ರೀ ಬಾಲಜಿ ಟ್ರೇಡರ್ಸ್ ಪಟಾಕಿ ಮಳಿಗೆ ಮಾಲೀಕ ರಾಮಸ್ವಾಮಿ ರೆಡ್ಡಿ, ನವೀನ್ ರೆಡ್ಡಿ ಬಂಧಿಸಲಾಗಿತ್ತು. ಜಾಗದ ಮಾಲೀಕ ಅನಿಲ್ ರೆಡ್ಡಿ ಸೇರಿದಂತೆ ಇತರರ ವಿರುದ್ದ FIR ದಾಖಲಾಗಿತ್ತು. ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಿದೆ.