Home Uncategorized ಅತ್ಯಾಚಾರ ಪ್ರಕರಣ: ವಕೀಲರ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಅತ್ಯಾಚಾರ ಪ್ರಕರಣ: ವಕೀಲರ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

18
0

ಇಂಟರ್ನ್​ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವಕೀಲರೊಬ್ಬರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಅದರ ಕುರಿತು ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರು: ಇಂಟರ್ನ್​ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವಕೀಲರೊಬ್ಬರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಅದರ ಕುರಿತು ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಆರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ದೂರುದಾರನ ಪ್ರಾಥಮಿಕ ಅಂಶಗಳು ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಿ, ಆರೋಪ ಪಟ್ಟಿ ರದ್ದುಪಡಿಸಲು ನಿರಾಕರಿಸಿತು.

ಅಲ್ಲದೆ, ಪ್ರಕರಣದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿದಲ್ಲಿ ವಕೀಲರ ಕಚೇರಿಗೆ ಇಂಟರ್ನಿಯಾಗಿ ಪ್ರವೇಶಿಸಿದವರ ಮೇಲಿನ ಭಯಾನಕ ಕೃತ್ಯಗಳನ್ನು ನಿರಾಕರಿಸಿದಂತಾಗಲಿದೆ. ಇದು ವಕೀಲರ ವೃತ್ತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜೊತೆಗೆ, ಅರ್ಜಿದಾರರ ಕೆಟ್ಟ ನಡೆಯನ್ನು ಪ್ರಶಂಸೆ ಮಾಡಿದಂತಾಗಲಿದೆ. ಹೀಗಾಗಿ ಅರ್ಜಿದಾರರು ವಿಚಾರಣೆ ಎದುರಿಸಿ, ಆರೋಪ ಮುಕ್ತರಾಗಿ ಹೊರಬರಬೇಕಾಗಿದೆ. ಈ ನಿಟ್ಟಿನಲ್ಲಿ ಅರ್ಜಿಯನ್ನು ತಿರಸ್ಕರಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

ಆರೋಪಿಯು ಶಿಕ್ಷಕ ಮತ್ತು ನಂಬಿಕಸ್ಥನ ಸ್ಥಾನದಲ್ಲಿರುತ್ತಾರೆ. ಹೀಗಾಗಿ ಐಪಿಸಿ ಸೆಕ್ಷನ್ 376(2)(ಎಫ್)ರ ಆರೋಪಗಳಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಪರಿಶೀಲನೆ ನಡೆಸಬೇಕಾಗುತ್ತದೆ. ಘಟನೆಯ ಸಂಬಂಧ ಅರ್ಜಿದಾರರು ಒಪ್ಪಿಕೊಂಡಿದ್ದರೂ, ಅದೊಂದು ಪ್ರಯತ್ನವಾಗಿದೆ, ಆರೋಪಿಸಿದಂತೆ ಘಟನೆ ನಡೆದಿಲ್ಲ ಎಂದು ವಕೀಲರು ವಾದಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳು ಸೇರಿದಂತೆ ಇತರೆ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

LEAVE A REPLY

Please enter your comment!
Please enter your name here