Home Uncategorized ಅನುದಾನ ಬಳಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ: ಸಚಿವ ಡಾ.ಜಿ.ಪರಮೇಶ್ವರ್

ಅನುದಾನ ಬಳಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ: ಸಚಿವ ಡಾ.ಜಿ.ಪರಮೇಶ್ವರ್

24
0

ಮಳೆ ಕೊರತೆಯಿಂದಾಗಿ ರಾಜ್ಯದ ಹಲವೆಡೆ ನೀರಿನ ಸಮಸ್ಯೆಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಲಭ್ಯವಿರುವ ಹಣವನ್ನು ಬಳಕೆ ಮಾಡಿ, ನೀರಿನ ಸಮಸ್ಯೆಯನ್ನು ತಗ್ಗಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಸೂಚಿನೆ ನೀಡಿದ್ದಾರೆ. ತುಮಕೂರು: ಮಳೆ ಕೊರತೆಯಿಂದಾಗಿ ರಾಜ್ಯದ ಹಲವೆಡೆ ನೀರಿನ ಸಮಸ್ಯೆಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಲಭ್ಯವಿರುವ ಹಣವನ್ನು ಬಳಕೆ ಮಾಡಿ, ನೀರಿನ ಸಮಸ್ಯೆಯನ್ನು ತಗ್ಗಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಸೂಚಿನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು (ಇಒಗಳು) ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಕುಣಿಗಲ್ ಸೇರಿದಂತೆ ಜಿಲ್ಲೆಯ ಮೂರು ಗ್ರಾಮಗಳು ಮಾತ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದು ಅಧಿಕಾರಿಗಳು ಅಂಕಿಅಂಶಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಂ.ಟಿ.ಕೃಷ್ಣಪ್ಪ ಮತ್ತು ಡಾ.ರಂಗನಾಥ್ ಆಕ್ಷೇಪ ವ್ಯಕ್ತಪಡಿಸಿ, ಈ ಅಂಕಿಅಂಶ ಸರಿಯಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂಜಿಎನ್‌ಆರ್‌ಇಜಿಎ ಅಡಿಯಲ್ಲಿ 21.32 ಕೋಟಿ ರೂ.ಗಳ ಕಾಮಗಾರಿ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ನಿಮ್ಮ ಅಧಿಕಾರ ಬಳಸಿ ಎಂಎನ್‌ಆರ್‌ಇಜಿಎ ಮಾರ್ಗಸೂಚಿಗಳ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.

ಮನ್ರೇಗಾ ನಿಯಮಗಳು ಹೂಳು ತೆಗೆಯಲು ಮತ್ತು ಯಂತ್ರಗಳ ಬಳಕೆಗೆ ಅನುವು ಮಾಡಿಕೊಡುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆಯವರು, ಬೇಡಿಕೆಗೆ ಅನುಗುಣವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದರು. 15 ದಿನಗಳಲ್ಲಿ ಕ್ರಿಯಾ ಯೋಜನೆ ಮತ್ತು ವರದಿ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ತಿಪಟೂರು ಶಾಸಕ ಕೆ.ಷಡಕ್ಷರಿ ಹಾಗೂ ಎಂಟಿ ಕೃಷ್ಣಪ್ಪ ಅವರು ಕೊಬ್ಬರಿ ಬೆಲೆ ಕುಸಿತ ಕಂಡಿರುವ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಹಾಗೂ ನಾಫೆಡ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಹಾಗೂ ಪರಿಹಾರ ಒದಗಿಸುವುದಾಗಿ ಸಚಿವ ರಾಜಣ್ಣ ಅವರು ಭರವಸೆ ನೀಡಿದರು.

LEAVE A REPLY

Please enter your comment!
Please enter your name here