Home Uncategorized ಅಪರಾಧ ನಡೆಯದಂತೆ ಮುಂಜಾಗ್ರತೆ ವಹಿಸುವುದು ಅಗತ್ಯ: ಎಸ್ಸೈ ಪವನ್ ನಾಯಕ್

ಅಪರಾಧ ನಡೆಯದಂತೆ ಮುಂಜಾಗ್ರತೆ ವಹಿಸುವುದು ಅಗತ್ಯ: ಎಸ್ಸೈ ಪವನ್ ನಾಯಕ್

27
0

ಕುಂದಾಪುರ, ಜ.19: ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ ಅಪರಾಧ ಆಗದಂತೆ ನೋಡಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಕೈ ಜೋಡಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದ್ದಾರೆ.

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಎಸ್ಸೈ ನೂತನ್ ಡಿ.ಇ. ಸೈಬರ್ ಕ್ರೈಮ್ ಇದರ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಮ್, ಉಪಪ್ರಾಂಶು ಪಾಲ ಪ್ರೊ.ಮೆಲ್ವಿನ್ ಡಿಸೋಜ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್‌ಕ್ರಾಸ್ ಘಟಕದ ಸಂಯೋಜಕ ಪ್ರೊ.ಬಾಲನಾಗೇಶ್ವರ್ ಎಸ್., ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಹಾಗೂ ಐಕ್ಯುಎಸಿ ಹೆಡ್ ಪ್ರೊಫೆಸರ್ ತಿಮ್ಮಪ್ಪ ಡಿ.ಎಸ್. ಮೊದಲಾದವರು ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಸುಷ್ಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here