Home ಕರ್ನಾಟಕ ಅಪಹರಣ ಪ್ರಕರಣ: ಭವಾನಿ ರೇವಣ್ಣರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ಅಪಹರಣ ಪ್ರಕರಣ: ಭವಾನಿ ರೇವಣ್ಣರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

26
0

ಬೆಂಗಳೂರು, ಜೂ.18: ಮೈಸೂರಿನ ಕೆ.ಆರ್.ನಗರದಿಂದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿ ಆದೇಶಿದೆ.

ಭವಾನಿ ರೇವಣ್ಣ ವಿಚಾರಣೆಗೆ ಸಹಕರಿಸಿಲ್ಲ ಎಂದು ಎಸ್ ಐಟಿ ಪೊಲೀಸರು ಹೇಳಿದ್ದಾರೆ. ಆದರೆ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗದು. ಅಲ್ಲದೆ ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಪೀಠ ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ‘ಅಕ್ಕ ಬಟ್ಟೆ ಊಟ ಕಳುಹಿಸಿದ್ದರೆಂದು’ ಸಂತ್ರಸ್ತೆ ಹೇಳಿಕೆಯಿದೆ ಎಂದು ಅಭಿಪ್ರಾಯ ಪಟ್ಟು ನಿರೀಕ್ಷಣಾ ಜಾಮೀನು ನೀಡಿ ನ್ಯಾ. ಕೃಷ್ಣ ಎಸ್ ದೀಕ್ಷಿತ್ ರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.

ಅಲ್ಲದೆ ಭವಾನಿ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲವೆಂದು ಷರತ್ತು ವಿಧಿಸಿ ಆದೇಶಿಸಿದೆ.

LEAVE A REPLY

Please enter your comment!
Please enter your name here