ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸ್ಫೋಟದಲ್ಲಿ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಅಯ್ಬಕ್‌ನಲ್ಲಿರುವ ಮದರಸಾದಲ್ಲಿ ನಡೆದ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದ್ದಾರೆ. ಈ ದಾಳಿಯ ಹೊಣೆಯನ್ನು ಈವರೆಗೆ ಯಾರೂ ಹೊತ್ತುಕೊಂಡಿಲ್ಲ. ಆದರೆ ಇಸ್ಲಾಮಿಕ್ ಸ್ಟೇಟ್ ಗುಂಪಿನ ಅಫಘಾನ್ ಅಂಗಸಂಸ್ಥೆಯು ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡಾಗಿನಿಂದ ಹಿಂಸಾಚಾರ ನಡೆಸುತ್ತಲೇ ಇದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)