Home Uncategorized ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೆ ಆಘಾತ!

ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೆ ಆಘಾತ!

33
0

ಜ್ವರದಿಂದ ಬಳಲುತ್ತಿರುವ ಆರಂಭಿಕ ಬ್ಯಾಟರ್ ಶುಭ್​ಮನ್ ಗಿಲ್ ಎರಡನೇ ಪಂದ್ಯದಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಗಿಲ್​ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, ಶುಭ್‌ಮನ್ ಗಿಲ್ ಅವರು 9 ಅಕ್ಟೋಬರ್ (ಇಂದು) 2023ರಂದು ದೆಹಲಿಗೆ ತಂಡದೊಂದಿಗೆ ಪ್ರಯಾಣಿಸುವುದಿಲ್ಲ. ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಅಲಭ್ಯರಾಗಿದ್ದ ಅವರು ಅಫ್ಘಾನಿಸ್ತಾನ ವಿರುದ್ಧದ ಮುಂದಿನ ಪಂದ್ಯದಲ್ಲೂ ಅಲಭ್ಯರಾಗಲಿದ್ದಾರೆ ಎಂದು ಹೇಳಿದ್ದಾರೆ.

ಗಿಲ್​ ಅವರು ಅಕ್ಟೋಬರ್ 11ರಂದು ದೆಹಲಿಯಲ್ಲಿ ಹಾಗೂ ಮತ್ತೆ ಚೆನ್ನೈನಲ್ಲಿ ಉಳಿದುಕೊಳ್ಳುತ್ತಾರೆ.  ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ. ಮುಂದಿನ ಪಂದ್ಯಗಳ ಹಿತದೃಷ್ಟಿಯಿಂದ ಅಘ್ಘಾನಿಸ್ತಾನ ಪಂದ್ಯಕ್ಕೂ ಗಿಲ್​ ಅವರು ಅಲಭ್ಯರಾಗಲಿದ್ದಾರೆ. ಸಂಪೂರ್ಣ ಗುಣಮುಖರಾದ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

The post ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೆ ಆಘಾತ! appeared first on Ain Live News.

LEAVE A REPLY

Please enter your comment!
Please enter your name here