Home Uncategorized 'ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳು ಮಾತನಾಡುವಂತಿಲ್ಲ: ಡಿಕೆಶಿ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಬೇಕು'

'ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳು ಮಾತನಾಡುವಂತಿಲ್ಲ: ಡಿಕೆಶಿ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಬೇಕು'

17
0

ಅಭಿವೃದ್ಧಿ ಯೋಜನೆಗಳು ಮತ್ತು ಇತರ ವಿಷಯಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ಸರ್ಕಾರಿ ಅಧಿಕಾರಿಗಳು  ಮಾಧ್ಯಮಗಳಿಗೆ ಬಿಡುಗಡೆ ಮಾಡಬಾರದು ಎಂದು ಸೂಚಿಸಲಾಗಿದೆ. ಬೆಂಗಳೂರು: ಅಭಿವೃದ್ಧಿ ಯೋಜನೆಗಳು ಮತ್ತು ಇತರ ವಿಷಯಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ಸರ್ಕಾರಿ ಅಧಿಕಾರಿಗಳು  ಮಾಧ್ಯಮಗಳಿಗೆ ಬಿಡುಗಡೆ ಮಾಡಬಾರದು ಎಂದು ಸೂಚಿಸಲಾಗಿದೆ.

ವಿಶೇಷವಾಗಿ ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ವಿಷಯಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಧಿಕಾರಿಗಳಿಗೆ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ.

ಮಾಧ್ಯಮಗಳಿಗೆ ಬದಲಾಗಿ, ಎಲ್ಲಾ ಮಾಹಿತಿ ಮತ್ತು ದೈನಂದಿನ ವರದಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿಗೆ ಸಲ್ಲಿಸಲು ಅವರಿಗೆ ಸೂಚಿಸಲಾಗಿದೆ, ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ.  ಗೊಂದಲ ಮತ್ತು ವಿರೋಧಾಭಾಸ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಎಸ್‌ಪಿಸಿಬಿ ಅಕ್ರಮ: ಅಕ್ರಮಗಳ ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ

ಆದರೆ ನಿರ್ದಿಷ್ಟ ಇಲಾಖೆಯಲ್ಲಿಇತ್ತೀಚಿಗೆ ನಡೆದ ಬೆಳವಣಿಗೆಗಳು ಇರುಸು -ಮುರುಸು ಉಂಟು ಮಾಡಿವೆ.  ಅಧಿಕಾರಿಗಳ ಹೇಳಿಕೆಗಳು ಸಚಿವರು ಹೇಳಿದ್ದಕ್ಕೆ ವ್ಯತಿರಿಕ್ತವಾಗಿವೆ, ಹೀಗಾಗಿ ಗೊಂದಲ ಮತ್ತು ವಿರೋಧಾಭಾಸಗಳನ್ನು ತಪ್ಪಿಸಲು, ಯಾವುದೇ ಅಧಿಕೃತ ಪತ್ರಿಕಾ ಹೇಳಿಕೆಗಳನ್ನು ನೀಡದಂತೆ ಎಲ್ಲಾ ನಾಗರಿಕ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರಕ್ಕೆ ಇಮೇಜ್ ಮೇಕ್ ಓವರ್ ನೀಡುವ ಗುರಿ ಹೊಂದಿರುವ ಬ್ರಾಂಡ್ ಬೆಂಗಳೂರು ಯೋಜನೆಯ ಮೇಲೆ ಸಚಿವರು ಗಮನಹರಿಸಿದ್ದಾರೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಹುಪಾಲು ಕಾಮಗಾರಿಗಳು ಬಿಬಿಎಂಪಿಯ ಡೊಮೇನ್‌ನಲ್ಲಿರುತ್ತವೆ. ಶಿವಕುಮಾರ್ ಅವರಿಗೆ ತಿಳಿಯದೆ ಮುಖ್ಯ ಆಯುಕ್ತರು ಮತ್ತು ವಿವಿಧ ಇಲಾಖೆಗಳ ವಿಶೇಷ ಆಯುಕ್ತರ ಯಾವುದೇ ಹೇಳಿಕೆಗಳು ಅದೇ ಮಾಹಿತಿಯ ವಿವಿಧ ಗೊಂದಲಗಳಿಗೆ ಕಾರಣವಾಗಬಹುದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್- ಬಿಕೆ ಹರಿಪ್ರಸಾದ್ ಭೇಟಿ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರಾ ಡಿಸಿಎಂ?

ಇಡೀ ನಗರಾಡಳಿತ ವ್ಯವಸ್ಥೆಯು ಸಚಿವರ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ. “ಸಚಿವರು ನಾಗರಿಕರು ಮತ್ತು ತಜ್ಞರಿಂದ ಸಲಹೆಗಳನ್ನು ಪಡೆಯುತ್ತಿದ್ದಾರೆ, ಆದರೆ  ನಗರಕ್ಕಾಗಿ ವಾರ್ಡ್ ಸಮಿತಿ ಸಭೆಗಳು ಕಡ್ಡಾಯವಾಗಿದೆ ಎಂದು NLSIU ನ ಸಹಾಯಕ ಪ್ರಾಧ್ಯಾಪಕ ಡಾ.ಕ್ಷಿತಿಜ್ ಉರಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here