ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝೆಡ್ ಜಮೀರ್ ಅಹ್ಮದ್ ಖಾನ್ ಸೋಮವಾರ ಹೇಳಿದ್ದಾರೆ. ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝೆಡ್ ಜಮೀರ್ ಅಹ್ಮದ್ ಖಾನ್ ಸೋಮವಾರ ಹೇಳಿದ್ದಾರೆ.
ಅಲ್ಪಸಂಖ್ಯಾತರ ನಿಯೋಗದೊಂದಿಗೆ ಮಾತನಾಡಿದ ಖಾನ್, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಹಜ್ ಯಾತ್ರಿಕರ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಸಚಿವ ಜಮೀರ್ ಅಹ್ಮದ್
ಸರ್ಕಾರದ ಮಟ್ಟದಲ್ಲಿ ಮಾಡಬೇಕಾದ ಕೆಲಸಗಳು ಮತ್ತು ಅವುಗಳ ಅನುಷ್ಠಾನದ ನಿರ್ಧಾರಗಳ ಬಗ್ಗೆ ಅಧ್ಯಯನವನ್ನು ಕೈಗೊಳ್ಳಲು ತಂಡವನ್ನು ರಚಿಸಲಾಗುವುದು ಎಂದು ಹೇಳಿದರು.