Home ಚಿಕ್ಕಬಳ್ಳಾಪುರ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಿಜೆಪಿ ಬದ್ಧ: ಸಚಿವ ಡಾ.ಕೆ.ಸುಧಾಕರ್

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಿಜೆಪಿ ಬದ್ಧ: ಸಚಿವ ಡಾ.ಕೆ.ಸುಧಾಕರ್

43
0
BJP is committed to welfare of minorities: Minister Dr. K. Sudhakar

ಚಿಕ್ಕಬಳ್ಳಾಪುರ:

ಭಾರತದಾದ್ಯಂತ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ ನೂರಾರು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಏನನ್ನೂ ಮಾಡಿಲ್ಲ ಎಂದು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಧರ್ಮದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಮುಸ್ಲಿಮರಿಗಾಗಿ ಪ್ರಧಾನಿ ಮೋದಿ ಅವರು ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದರು.

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಏನನ್ನೂ ಮಾಡಿಲ್ಲ. ಹೀಗಾಗಿ ಅವರಿಗೆ ಕಾಂಗ್ರೆಸ್ ಮೇಲಿದ್ದ ನಂಬಿಕೆ ಹೋಗಿದೆ. ಶೇ.30ರಷ್ಟು ಮುಸ್ಲಿಮರು ಇರುವ ಉತ್ತರ ಪ್ರದೇಶದಂತಹ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬಿಜೆಪಿ ಮೇಲೆ ಅವರು ನಂಬಿಕೆ ಇಟ್ಟಿರುವುದನ್ನು ಸಾಬೀತುಪಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಅಲ್ಪಸಂಖ್ಯಾತರು ಬಿಜೆಪಿಗೆ ಮತ ಹಾಕಲಿದ್ದಾರೆಂದು ವಿಶ್ವಾಸವ್ಯಕ್ತಪಡಿಸಿದರು.

ತಮ್ಮ ನಾಯಕ ರಾಹುಲ್ ಗಾಂಧಿ ಕೈಗೊಡ ಭಾರತ್ ಜೋಡೋ ಯಾತ್ರೆಯಂತೆಯೇ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯದ ನಾಯಕರು ಕೈಗೊಂಡಿದ್ದು, ಈ ಕುರಿತು ಸುಧಾಕರ್ ಅವರು ಲೇವಡಿ ಮಾಡಿದರು. ದೇಶ ಆಯ್ತು ಇದೀಗ ಕಾಂಗ್ರೆಸ್ ನಾಯಕರು ರಾಜ್ಯದ ವಿವಿಧೆಡೆ ಯಾತ್ರೆ ನಡೆಸಿ ರಾಜ್ಯವನ್ನು ವಿಭಜಿಸಲು ಹೊರಟಿದ್ದಾರೆಂದು ಹೇಳಿದರು.

ಕೋಲಾರದ ಕಾಂಗ್ರೆಸ್ ಸಂಸದ ಕೆ.ಎಚ್.ಮುನಿಯಪ್ಪ ದೇಶಕ್ಕೆ ನೀಡಿದ ಕೊಡುಗೆ ನೀಡಿದ್ದು, ತಮ್ಮದೇ ಪಕ್ಷದ ನಾಯಕರು ತಮ್ಮನ್ನು ರಾಜಕೀಯವಾಗಿ ಮುಗಿಸಿದರೂ ಕೂಡ ಮುನಿಯಪ್ಪ ಅವರು ಪಕ್ಷಕ್ಕೆ ನಿಷ್ಠರಾಗಿದ್ದಾರೆಂದು ಹೇಳಿದರು.

LEAVE A REPLY

Please enter your comment!
Please enter your name here