ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್.ಐ.ಟಿ. ತಂಡವು ಕೇಸ್ ಹಸ್ತಾಂತರ ಮಾಡಿಕೊಂಡು ತಮ್ಮ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿರುವುದಾಗಿ ವರದಿಯಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಸ್‌ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದ್ದು, ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಹಾಗೂ ಆಪ್ತ ಲಿಖಿತ್ ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.