ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ JDS ಎಂಎಲ್ಸಿ ಸೂರಜ್ ರೇವಣ್ಣ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಪೀಠ ವಜಾ ಮಾಜಿ ಆದೇಶ ಹೊರಡಿಸಿದ್ದಾರೆ.
ಇನ್ನು JDS ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಸೂರಜ್ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
