Home Uncategorized ಆಗಸ್ಟ್ 1 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಆಗಸ್ಟ್ 1 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

11
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಬೆಳಗ್ಗೆ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ನಂತರ ಉಡುಪಿ ಕಡೆಗೆ ತೆರಳಲಿದ್ದಾರೆ.  ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕಾರ, ಸಿಎಂ ಬೆಳಗ್ಗೆ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ನಂತರ ಉಡುಪಿ ಕಡೆಗೆ ತೆರಳಲಿದ್ದಾರೆ. ಅಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಉಡುಪಿಯಲ್ಲಿ ಸಭೆ ಮುಗಿಸಿ ಮಧ್ಯಾಹ್ನ 3.30ಕ್ಕೆ ರಸ್ತೆ ಮೂಲಕ ತೆರಳುವ ಸಿದ್ದರಾಮಯ್ಯ ಅವರು ಸಂಜೆ 4.15ಕ್ಕೆ ಮಂಗಳೂರು ತಲುಪುವ ನಿರೀಕ್ಷೆಯಿದೆ. ನಂತರ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ರಾತ್ರಿ 9 ಗಂಟೆಗೆ ಅಲ್ಲಿಂದ ಹೊರಟು ರಸ್ತೆ ಮೂಲಕ ರಾತ್ರಿ 9.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವ ನಿರೀಕ್ಷೆಯಿದೆ. ಬಳಿಕ ರಾತ್ರಿ 9.50ಕ್ಕೆ ವಿಮಾನ ಹತ್ತಿ ರಾತ್ರಿ 10.45ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here