Home Uncategorized ಆದೇಶ ಧಿಕ್ಕರಿಸಿ ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರದ ವಿಸರ್ಜನೆಗೂ ಕಾರಣವಾಗಬಹುದು: ಸಿಎಂ ಸಿದ್ದರಾಮಯ್ಯ

ಆದೇಶ ಧಿಕ್ಕರಿಸಿ ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರದ ವಿಸರ್ಜನೆಗೂ ಕಾರಣವಾಗಬಹುದು: ಸಿಎಂ ಸಿದ್ದರಾಮಯ್ಯ

23
0

ತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಒಪ್ಪುತ್ತದೆ, ಆದರೆ ಅದು ನ್ಯಾಯಾಂಗ ನಿಂದನೆ ಮತ್ತು ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಒಪ್ಪುತ್ತದೆ, ಆದರೆ ಅದು ನ್ಯಾಯಾಂಗ ನಿಂದನೆ ಮತ್ತು ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಕರ್ನಾಟಕ ಜಲಸಂರಕ್ಷಣಾ ಸಮಿತಿ – ರೈತ ಸಂಘಗಳು ಸೇರಿದಂತೆ ಸಂಘಟನೆಗಳ ಸದಸ್ಯರಿಗೆ ಸರ್ಕಾರದ ಸ್ಥಿತಿಯ ಬಗ್ಗೆ ವಿವರಿಸಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯದ ಜಲಾಶಯಗಳ ಮೇಲೆ ಕೇಂದ್ರವು ನಿಯಂತ್ರಣ ಸಾಧಿಸಬಹುದು ಎಂದು ಹೇಳಿದರು.

ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿ ಈ ಸಮಸ್ಯೆ ಉದ್ಭವಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ತಿಂಗಳೂ ಸಹ ರಾಜ್ಯದಲ್ಲಿ ಇದುವರೆಗೆ ಕಡಿಮೆ ಮಳೆಯಾಗಿದೆ. ನಾವು ಈ ವಿಷಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಸಭೆಗಳಲ್ಲಿ ಪ್ರಸ್ತಾಪಿಸಿದ್ದೇವೆ. ಕಾವೇರಿ ಜಲಾನಯನ ಪ್ರದೇಶದ ನಮ್ಮ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿಲ್ಲ. ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಕಾವೇರಿ ವಿವಾದ: ಭಾಷಿಕ ಅಲ್ಪಸಂಖ್ಯಾತರ ರಕ್ಷಣೆಗೆ ಸೌಹಾರ್ದಯುತ ಸಂಬಂಧಕ್ಕೆ ಕರೆ ನೀಡಿದ ತಮಿಳುನಾಡು ಸಚಿವ

ರಾಜ್ಯಕ್ಕೆ ನೀರಾವರಿಗೆ 70 ಟಿಎಂಸಿ, ಕುಡಿಯುವ ಉದ್ದೇಶಕ್ಕೆ 30 ಟಿಎಂಸಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ಒಟ್ಟಾರೆಯಾಗಿ, ರಾಜ್ಯಕ್ಕೆ 106 ಟಿಎಂಸಿ ಅಡಿ ಅಗತ್ಯವಿದೆ. ಆದರೆ ನಮ್ಮಲ್ಲಿ 50 ಟಿಎಂಸಿ ಅಡಿ ನೀರು ಮಾತ್ರ ಇದೆ. ಜನರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

ಅಕ್ಟೋಬರ್ 15 ರವರೆಗೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸಿಡಬ್ಲ್ಯೂಎಂಎ ನಿರ್ದೇಶನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ರೈತರ ನಿಯೋಗವು ಕಾನೂನು ತಜ್ಞರೊಂದಿಗಿನ ಸಭೆಯ ಮೊದಲು ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಸಮಿತಿ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನವನ್ನು ಕರೆಯಬೇಕು ಮತ್ತು ಸಂಕಷ್ಟ ಸೂತ್ರದ ಕುರಿತು ಎಲ್ಲಾ ಪಾಲುದಾರರು ಒಮ್ಮತಕ್ಕೆ ಬರುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೇಂದ್ರಕ್ಕೆ ಕಳುಹಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ರೈತ ಮುಖಂಡ ಕುರುಬೂರು ಶಾಂತಕುಮಾರ್, ಮಾಜಿ ಶಾಸಕ, ಎಎಪಿ ರಾಜ್ಯ ಮುಖಂಡ ಮುಖ್ಯಮಂತ್ರಿ ಚಂದ್ರು ಮತ್ತಿತರ ನಾಯಕರು ರಾಜ್ಯದ ಹಿತ ಕಾಪಾಡಲು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿವಿಧ ರೈತ ಸಂಘಗಳು ಮತ್ತು ಕನ್ನಡಪರ ಸಂಘಟನೆಗಳ ಸದಸ್ಯರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಿಎಂಗೆ ಒತ್ತಾಯಿಸಿದರು.

ಕಾವೇರಿ ಬಿಕ್ಕಟ್ಟು ಬಗೆಹರಿಸಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮಾದರಿಯಲ್ಲಿ ನೀರಾವರಿ ತಜ್ಞರು, ರೈತ ಸಂಘಗಳ ಪ್ರತಿನಿಧಿಗಳು ಮತ್ತು ನದಿ ತೀರದ ರಾಜ್ಯಗಳ ಅಧಿಕಾರಿಗಳ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ರಾಜ್ಯವು ಕೇಂದ್ರವನ್ನು ಒತ್ತಾಯಿಸಬೇಕು ಎಂದು ಸಮಿತಿ ತನ್ನ ಪತ್ರದಲ್ಲಿ ತಿಳಿಸಿದೆ. ಸಿಡಬ್ಲ್ಯುಎಂಎ ತೀರ್ಪು ಅವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here