Home Uncategorized ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ.ಬಿಡುಗಡೆ: ಸಚಿವ ಈಶ್ವರ್ ಖಂಡ್ರೆ

ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ.ಬಿಡುಗಡೆ: ಸಚಿವ ಈಶ್ವರ್ ಖಂಡ್ರೆ

15
0

ಬೆಂಗಳೂರು: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೆ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರಕಾರ 50 ಕೋಟಿ ರೂ.ಬಿಡುಗಡೆ ಮಾಡಿದೆ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್ ವರೆಗಿನ ಬಿಲ್‍ಗಳನ್ನು ಪಾವತಿ ಮಾಡಲು, ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50ಕೋಟಿ ರೂ.ಬಿಡುಗಡೆ ಮಾಡುವಂತೆ ತಾವು ಮಾಡಿದ್ದ ಮನವಿಗೆ ಸ್ಪಂದಿಸಿ, ತಕ್ಷಣವೇ ಹಣ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅನುಭವ ಮಂಟಪ ನಿರ್ಮಾಣ ಮಾಡಬೇಕು ಎಂದು 2017ರಲ್ಲಿ ಪೌರಾಡಳಿತ ಸಚಿವರಾಗಿದ್ದಾಗ ತಾವು ಮಾಡಿದ್ದ ಮನವಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಅನುಮೋದನೆ ನೀಡಿ ಬಜೆಟ್‍ನಲ್ಲಿ ಪ್ರಕಟಿಸಿದ್ದರು. ಆಧುನಿಕ ಅನುಭವ ಮಂಟಪ ನಿರ್ಮಾಣ ಸಚಿವರಾಗಿ ತಮ್ಮ ಕನಸಾಗಿದ್ದು, ಮುಂದಿನ 2 ವರ್ಷಗಳಲ್ಲಿ ಭವ್ಯ, ದಿವ್ಯ ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಿ ಬಸವ ಕಲ್ಯಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡುವ ಆಶಯ ಹೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here