ಬೆಂಗಳೂರು:
ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಕುರಿತು ತಕ್ಷಣವೇ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಆನ್‍ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ಹೆಚ್ಚಾಗಿ ತೊಂದರೆಯಾಗುತ್ತಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.
ಆನ್‍ಲೈನ್ ಶಿಕ್ಷಣ ಮಾರ್ಗದರ್ಶಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ದಪಡಿಸಲಾಗಿದೆ. ಸದರಿ ಮಾರ್ಗದರ್ಶಿ ಹಾಗೂ ವರದಿಯ ಆಧಾರದ ಮೇರೆಗೆ ರಾಜ್ಯದ ಎಲ್ಲಾ ಶಾಲೆಗಳು ಆನ್‍ಲೈನ್ ಶಿಕ್ಷಣವನ್ನು ನಡೆಸುವಂತೆ ವಿವರವಾದ ಸುತ್ತೋಲೆಯನ್ನು ತಕ್ಷಣವೇ ಹೊರಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಸೂಚಿಸಿದ್ದಾರೆ ಎಂದು ಅವರ ಸಚಿವಾಲಯ ತಿಳಿಸಿದೆ.