Home ಅಪರಾಧ ಆಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್; ಇಬ್ಬರ ಬಂಧನ, 12 ಲಕ್ಷ ರೂ.ನಗದು ವಶ

ಆಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್; ಇಬ್ಬರ ಬಂಧನ, 12 ಲಕ್ಷ ರೂ.ನಗದು ವಶ

32
0

ಬೆಂಗಳೂರು:

ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 12 ಲಕ್ಷ ರೂ. ನಗದು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಾಮರಾಜಪೇಟೆ 6ನೆ ಕ್ರಾಸ್, 1ನೇ ಮೈನ್ ಪ್ಲಾಟ್ ನಂ 308ರ ನಿವಾಸಿ ಆಕಾಶ್ ಜೈನ್ (29), ಶಾಂತಿನಗರ ಲಕ್ಷ್ಮ ರಸ್ತೆ 7ನೆ ಕ್ರಾಸ್, ನಿವಾಸಿ ನವೀನ್ ದಾನಿ (34) ಬಂಧಿತ ಆರೋಪಿಗಳು.

ಆರೋಪಿಗಳಿಂದ ಒಟ್ಟು 10,05,200 ರೂ. ನಗದು, 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕನ್ನಿಂಗ್ ಹ್ಯಾಂ ರಸ್ತೆಯ ಪೋರ್ಟಿಸ್ ಆಸ್ಪತ್ರೆ ಎದುರುಗಡೆ ಡಾಮಿನೋಸ್ ಮುಂಭಾಗದಲ್ಲಿ ಇಬ್ಬರು ವ್ಯಕ್ತಿಗಳು ಮುಂಬೈ ಇಂಡಿಯನ್-ದೆಹಲಿ ತಂಡಗಳ ನಡುವಿನ ಕ್ರಿಕೆಟ್ ಪಂದ್ಯ ಹಾಗೂ ರಾಯಲ್ ಚಾಲೆಂಜರ್ಸ್-ಸನ್ ರೈಸರ್ಸ್ ಹೈದರಾಬಾದ್ ಪಂದ್ಯಗಳಿಗೆ ಸಂಬಂಧಪಟ್ಟಂತೆ ಆಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ. ತಕ್ಷಣ ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ, ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್ ಹನುಮಂತರಾಯ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here