ಆರೋಗ್ಯಕರ ಪರಿಸರ ಸಮತೋಲನವನ್ನು ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಶುಕ್ರವಾರ ಹೇಳಿದರು. ಬೆಂಗಳೂರು: ಆರೋಗ್ಯಕರ ಪರಿಸರ ಸಮತೋಲನವನ್ನು ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಶುಕ್ರವಾರ ಹೇಳಿದರು.
ವಿಕಾಸಸೌಧದಲ್ಲಿ ಸದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ 1ರಿಂದ 7ರವರೆಗೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ವರ್ಷ 5 ಕೋಟಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಲಾಗುವುದು. ಪರಿಸರ ಸಂರಕ್ಷಣೆ, ಅರಣ್ಯವನ್ನು ಸಂಪತನ್ನು ಹೆಚ್ಚಿಸುವುದು ನಮ್ಮ ಗುರಿ. ಅರಣ್ಯಗಳನ್ನು ಸಂರಕ್ಷಿಸುವುದು ಮತ್ತು ಅತಿಕ್ರಮಣವಾಗದಂತೆ ನೋಡಿಕೊಳ್ಳುವುದು ಮುಖ್ಯ. ಆದರೆ, ಅಲ್ಲಿ ಮನೆಗಳನ್ನು ನಿರ್ಮಿಸಿದ ಬಡವರು ಹೊರಗೆ ಹಾಕಲು ಸಾಧ್ಯವಿಲ್ಲ. ಈ ಸಮಸ್ಯೆಗಳ ಜೊತೆಗೆ ಆರೋಗ್ಯಕರ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೇಳಿದರು.
ಅರಣ್ಯ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಸುಧಾರಿಸಲು ಮತ್ತು ಮನುಷ್ಯ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ತಜ್ಞರು ಮತ್ತು ಪರಿಸರ ಕಾರ್ಯಕರ್ತರ ಸಲಹೆಗಳನ್ನು ಪಡೆದುಕೊಳ್ಳಲು ಸರ್ಕಾರ ಮುಕ್ತವಾಗಿದೆ. ಅಧಿಕಾರಿಗಳ ವಿರುದ್ಧ ದೂರು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ವೇಳೆ ಅರಣ್ಯದೊಳಗಿನ ಅನಗತ್ಯ ನಾಗರೀಕ ಕಾಮಗಾರಿಗಳು ಮತ್ತು ನಿರ್ಮಾಣಗಳನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮಾನವ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ಮತ್ತು ಬಫರ್ ವಲಯಗಳನ್ನು ಬಲಪಡಿಸಲು ರಾಜ್ಯ ಸರ್ಕಾರವು ಕಾರ್ಯತಂತ್ರಗಳನ್ನು ಸಿದ್ಧಪಡಿಸುತ್ತಿದೆ ಎಂದು ತಿಳಿಸಿದರು.
ನೆಟ್ಟ ಸಸಿಗಳ ಬದುಕುಳಿಯುವಿಕೆಯ ಕುರಿತು ಮಾತನಾಡಿ, ಈ ಬಗ್ಗೆ ಇಲಾಖೆಯು 15 ದಿನಗಳಲ್ಲಿ ವರದಿ ಪಡೆಯಲಿದೆ. ಪ್ರಸ್ತುತ ಲಭ್ಯವಿರುವ ಮಾಹಿತಿಗಳ ಪ್ರಕಾರ ನೆಟ್ಟ ಸಸಿಗಳ ಬದುಕುಳಿಯುವಿಕೆಯ ಪ್ರಮಾಣವು ಶೇ.60ರಷ್ಟಿದೆ ಎಂದರು.
ಅನ್ನ ಭಾಗ್ಯ ಯೋಜನೆ ಕುರಿತು ಮಾತನಾಡಿ, ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ಬಿಜೆಪಿಯ ಪ್ರತಿಭಟನೆಯ ಕುರಿತು ಮಾತನಾಡಿ, ಬೇರಾವುದೇ ವಿಷಯಗಳು ಸಿಗದ ಕಾರಣ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಾರೆಂದು ಹೇಳಿದರು.