ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿನ್ನೆ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿನ್ನೆ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಆರೋಗ್ಯ ಸೌಧದಲ್ಲಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಗುಂಡೂರಾವ್ ಅವರು ಸರ್ಕಾರಿ ಟೆಂಡರ್‌ಗಳು ಮತ್ತು ಇತರ ಕಡತಗಳ ಅನುಮೋದನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.
ರಂದೀಪ್ ಅವರು ಸಚಿವರಿಗೆ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿ, ಪರಿಸ್ಥಿತಿ ಅವಲೋಕಿಸಿದರು. “ಇದು ಮೂರನೇ ಸಭೆ. ಸಭೆಗೆ ಯಾವುದೇ ನಿರ್ದಿಷ್ಟ ಕಾರ್ಯಸೂಚಿ ಇರಲಿಲ್ಲ. ತುರ್ತು ಆಂಬ್ಯುಲೆನ್ಸ್ ಸೇವೆಗಳು (108) ಮತ್ತು ಆರೋಗ್ಯವಾಣಿ (104) ಮುಂತಾದ ಹಲವು ವಿಷಯಗಳ ಕುರಿತು ನಾವು ಅವರಿಗೆ ಮಾಹಿತಿ ನೀಡಿದ್ದೇವೆ. ಅವರು ಸರ್ಕಾರಿ ಟೆಂಡರ್‌ಗಳ ಸ್ಥಿತಿಯನ್ನು ಪರಿಶೀಲಿಸಿದರು.
ಸಮಸ್ಯೆಗಳನ್ನು ಇನ್ನಷ್ಟು ಆಳವಾಗಿ ಅರಿತುಕೊಳ್ಳಲು ಸಚಿವರು ಪ್ರಯತ್ನಿಸಿದರು. ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ರಂದೀಪ್ ಹೇಳಿದರು.