ಕಾಂಗ್ರೆಸ್,ಜೆಡಿಎಸ್ ಹಿನ್ನಡೆ
ಬೆಂಗಳೂರು:
ಶಿರಾ ,ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ 16,909 ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ 15,515 ಮತಗಳನ್ನು, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 10,348 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 1394 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನ ಸಭಾ ಉಪ ಚುನಾವಣೆ ಏಳನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.ಮುನಿರತ್ನ- 44,802 ಮತಗಳನ್ನು,ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 22,125 ಮತಗಳನ್ನು,ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 1,711 ಮತಗಳನ್ನು ಪಡೆದುಕೊಂಡಿದ್ದಾರೆ.ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು 22,677 ಮತಗಳನ್ನು ಮುನ್ನಡೆ ದಾಖಲಿಸಿದ್ದಾರೆ.